Connect with us

Dvgsuddi Kannada | online news portal | Kannada news online

ತುಮಕೂರಿನಲ್ಲಿ ಬಸ್ ಪಲ್ಟಿ: ಸ್ಥಳದಲ್ಲಿಯೇ 8 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಮುಖ ಸುದ್ದಿ

ತುಮಕೂರಿನಲ್ಲಿ ಬಸ್ ಪಲ್ಟಿ: ಸ್ಥಳದಲ್ಲಿಯೇ 8 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ವೊಂದು  ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ 8 ಮಂದಿ ಸಾವನ್ನಪ್ಪಿದ್ದಾರೆ.  25ಕ್ಕೂ ಹೆಚ್ಚು ಮಂದಿ  ತೀವ್ರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.  ಬಸ್ ಪಲ್ಟಿಯಾಗುತ್ತಿದ್ದಂತ ಸ್ಥಳಕ್ಕೆ ದೌಡಾಯಿಸಿರುವ ಸ್ಥಳೀಯರು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಅಪಘಾತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ಅಪಘಾತಕ್ಕೊಳಗಾದ ಬಸ್  ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿತ್ತು ಗಾಯಾಳುಗಳನ್ನು ಪಾವಗಡದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು, ವೃದ್ಧರು ಪ್ರಯಾಣಿಸುತ್ತಿದ್ದರು. ಮೃತಪಟ್ಟವರಲ್ಲಿ ಹೆಚ್ಚು ವಿದ್ಯಾರ್ಥಿಗಳೇ ಇದ್ದಾರೆ ಎನ್ನಲಾಗಿದೆ.ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top