ತುಮಕೂರು: ಶಿರಾ ತಾಲೂಕಿನಲ್ಲಿ ಬೂದು ಗ್ರಾನೈಟ್ ಗಣಿಗಾರಿಕೆ ನಡೆಸಲು ಹರಾಜು ಇಲ್ಲದೆ ನಡೆಸಲು ವಿಶೇಷ ವಿನಾಯಿತಿ ನೀಡಿ ಕ್ಯಾಬಿನೆಟ್ ಅಂಗೀಕರಿಸಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ತುಮಕೂರು ಜಿಲ್ಲೆಯ ಶಿರಾದ ಮದ್ದಕ್ಕನಹಳ್ಳಿಯಲ್ಲಿ ಸರ್ವೆ ನಂಬರ್ 12 ರಲ್ಲಿ ಬೂದು ಗ್ರಾನೈಟ್ ಗಣಿಗಾರಿಕೆ ನಡೆಸಲು ಮದ್ದಕ್ಕನಹಳ್ಳಿ ಸ್ಟೋನ್ ಕಟ್ಟರ್ಸ್ ಕೋ ಆಪರೇಟಿವ್ ಸೊಸೈಟಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಇದರಿಂದ 5,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದರು.
ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಪ್ರಕರಣವೆಂದು ಪರಿಗಣಿಸುವ ಮೂಲಕ ಅದನ್ನು ಅನುಮೋದಿಸಲು ಕ್ಯಾಬಿನೆಟ್ ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಂಡಿತು. ಆರ್ಥಿಕ ಬಿಕ್ಕಟ್ಟಿನಿಂದಾಗಿ ಮಾನವೀಯ ಆಧಾರದ ಮೇಲೆ ಈ ಅನುಮೋದನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.



