ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ , ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಇಂದು (ಅ. 22) ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ನಾಯಕರ ಮಹತ್ವದ ಸಭೆ ನಡೆಯಲಿದೆ.
ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿ ತರುವುದಾಗಿ ಸರ್ಕಾರ ಘೋಷಣೆ ನಂತರ, ಅಖಿಲ ಭಾರತ ವೀರಶೈವ ಮಹಾಸಭಾ ಪಕ್ಷಾತೀತವಾಗಿ ಸಮಾಜದ ಎಲ್ಲಾ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲು ನಿರ್ಧರಿಸಿದೆ.
ಕಾಂಗ್ರೆಸ್-ಬಿಜೆಪಿ ಅಂತಾ ಏನೂ ಇಲ್ಲ.ಎಲ್ಲ ಪಕ್ಷಗಳ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ಸಭೆಯಲ್ಲಿ ಭಾಗವಹಿಸುವರು ಎಂದು ಶಾಮನೂರು ಶಿವಶಂಕರಪ್ಪ ಮಾಹಿತಿ ನೀಡಿದ್ದಾರೆ. ಸಭಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಶಾಮನೂರು ಶಿವಶಂಕರಪ್ಪ ಹಾಗೂ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಭೇಟಿ ಆಹ್ವಾನಿಸಿದ್ದರು. ಸಭೆಗೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಮಾಜಿ ಹಾಗೂ ಹಾಲಿ ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ.



