Connect with us

Dvgsuddi Kannada | online news portal | Kannada news online

ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

ಪ್ರಮುಖ ಸುದ್ದಿ

ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಆ.29ಕ್ಕೆ ಚುನಾವಣೆ ನಡೆಯಲಿದೆ.

ಜುಲೈ 21ರಂದು ತಾಲ್ಲೂಕು, ಮಹಾನಗರ, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ, ಆ.25ರಂದು ರಾಜ್ಯ ಘಟಕಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾಸಭಾದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

ಮತದಾರರ ಪಟ್ಟಿಯನ್ನು ಜೂನ್‌ 20ರಂದು ಪ್ರಕಟಿಸಲಾಗುತ್ತದೆ. ಮೂರು ಹಂತಗಳಲ್ಲಿ ನಡೆಯುವ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಜೂನ್‌ 27ರಿಂದ ಆರಂಭವಾಗಲಿದೆ. ಸೆ. 29ರಂದು ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಆಯ್ಕೆಯಾಗುವ ಹೊಸ ಸಮಿತಿಗಳು 2024-2025ನೇ ಸಾಲಿನಿಂದ 2028-2029ರ ಅವಧಿಗೆ ಕಾರ್ಯನಿರ್ವಹಿಸಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top