ಲಿಂಗಾಯಿತ ಅಭಿವೃದ್ಧಿ ನಿಗಮ; ಶೈಕ್ಷಣಿಕ ಸಾಲ, ಜೀವಜಲ, ಕಾಯಕಕಿರಣ, ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು..?

ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ವೀರಶೈವ ಲಿಂಗಾಯತ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಯಾವ ದಾಖಲೆ ಅಗತ್ಯ..?

ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಜೂನ್ 30 ಕೊನೆ ದಿನ

2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts