Connect with us

Dvgsuddi Kannada | online news portal | Kannada news online

ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ನಿರ್ಧಾರ

ಪ್ರಮುಖ ಸುದ್ದಿ

ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ನಿರ್ಧಾರ

ಬೆಂಗಳೂರು: 2019 – 20ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಎಲ್ಲಾ 14,183 ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸುವುದಾಗಿ ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಶಾಸಕ ಮರಿತಿಬ್ಬೇಗೌಡ ಅವರು, ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರಿಗೆ ಮಾತ್ರ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಉಳಿದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗಿದೆ ಎಂದರು. ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಕೂಡ ಇದರ ಬಗ್ಗೆ ಪ್ರಸ್ತಾಪಿಸಿ ಎಲ್ಲಾ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2019 – 20 ರಲ್ಲಿ ಕಾರ್ಯನಿರ್ವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.ಈಗಾಗಲೇ ಐದು ತಿಂಗಳ ಗೌರವ ಧನ ಬಿಡುಗಡೆ ಮಾಡಲಾಗಿದೆ. ಹಣಕಾಸು ಇಲಾಖೆಯ ಸೂಚನೆಯಂತೆ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ನೀಡಲಾಗಿದ್ದು, ಶೀಘ್ರವೇ ಎಲ್ಲಾ ಉಪನ್ಯಾಸಕರ ನೇಮಕಾತಿಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top