ಬೆಂಗಳೂರು: ರಾಜ್ಯದಲ್ಲಿ ಮಂಕಿ, ಜಿಂಕೆ ಪಾರ್ಕ್ ನಿರ್ಮಾಣಕ್ಕೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಡು ಪ್ರಾಣಿಗಳ ಹಾವಳಿ, ನಿಯಂತ್ರಣ ಮತ್ತು ಪರಿಹಾರದ ವಿಷಯವನ್ನು ಪ್ರಸ್ತಾಪ ಮಾಡಿದ ಶಾಸಕ ಅರಗಜ್ಞಾನೇಂದ್ರ, ತೀರ್ಥಹಳ್ಳಿ ಕೇತ್ರದಲ್ಲಿ ಕಾಡಾನೆ, ಕಾಡುಕೋಣ, ಕಾಡು ಹಂದಿ ಮತ್ತು ಮಂಗಗಳ ಹಾವಳಿ ಹೆಚ್ಚಾಗಿದೆ. ರೈತರ ಬೆಳೆ ಹಾಳಾಗುತ್ತಿದೆ. ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ಕಾಡು ಪ್ರಾಣಿಗಳ ಹಾವಳಿಗೆ ಪರಿಹಾರ ಹೆಚ್ಚಳ ಮಾಡುವ ಕುರಿತಾಗಿ ಪ್ರಸ್ತಾವ ಕೊಡಲಾಗಿದೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು, ಜಿಂಕೆ ಹಾವಳಿ ಜಾಸ್ತಿ ಇರುವ ಬಯಲು ಸೀಮೆಯಲ್ಲಿ ಜಿಂಕೆ ಪಾರ್ಕ್ ನಿರ್ಮಾಣ ಹಾಗೂ ಮಂಕಿ ಹೆಚ್ಚಿರುವ ಪ್ರದೇಶದಲ್ಲಿ ಮಂಕಿ ಪಾರ್ಕ್ ನಿರ್ಮಾಣದ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



