Connect with us

Dvgsuddi Kannada | online news portal | Kannada news online

ಎರಡ್ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

rain22

ಪ್ರಮುಖ ಸುದ್ದಿ

ಎರಡ್ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಗುಡುಗು ಸಹಿತ ಎರಡ್ಮೂರು ದಿನ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ (heavy rain) ಎಚ್ಚರಿಕೆ ನೂಡಲಾಗಿದೆ.

ದಾವಣಗೆರೆ: ಸಿಬ್ಬಂದಿ ಗಮನ ಬೇರೆ ಕಡೆ ಸೆಳೆದು 1.13 ಕೋಟಿ ಮೌಲ್ಯದ ಚಿನ್ನ ದೋಚಿದ ಖತರ್ನಾಕ್ ಬುರ್ಖಾ ಗ್ಯಾಂಗ್ ; ಎಲ್ಲಿ..?

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕಾಲೇಜು ಶಿಕ್ಷಣ ಇಲಾಖೆ: ಹೊರಗುತ್ತಿಗೆ ಆಧಾರದ ಮೇಲೆ 1000 ಗ್ರೂಪ್-ಡಿ ಸಿಬ್ಬಂದಿ ನೇಮಕಕ್ಕೆ ಟೆಂಡರ್

ಇಂದು (ಏ. 4) ಕರಾವಳಿಯ ಉಡುಪಿ, ದಕ್ಷಿಣ ಕನ್ನಡ,‌ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top