ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆ ಮಳೆ (rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather) ಮಾಹಿತಿ ನೀಡಿದೆ. ರಾಜ್ಯದಲ್ಲಿ ಮಾ.11 ರಿಂದ 14ರ ವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತೆ ನೀಡಲು ಕ್ರಮ; ಸಚಿವ ಖರ್ಗೆ
ರಾಜ್ಯದ ಕಲಬುರಗಿಯಲ್ಲಿ ಶುಕ್ರವಾರ ಅತೀ ಹೆಚ್ಚು ಉಷ್ಣಾಂಶ 39.2 ಡಿ.ಸೆ ದಾಖಲಾಗಿದೆ. ಇನ್ನು ದಾವಣಗೆರೆಯಲ್ಲಿ ಅತೀ ಕಡಿಮೆ ಉಷ್ಣಾಂಶ 13.5 ಡಿ.ಸೆ. ದಾಖಲಾಗಿದೆ.
ಮಾ.11 ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮಾ.12ರಂದು ದಕ್ಷಿಣ ಒಳನಾಡು, ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಾ.13ರಂದು ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಆಗಲಿದೆ.
ದಾವಣಗೆರೆ: ಮಾ.15 ರಂದು ಬೃಹತ್ ಉದ್ಯೋಗ ಮೇಳ; 40ಕ್ಕೂ ಹೆಚ್ಚು ಕಂಪನಿಗಳಿಂದ 3 ಸಾವಿರ ಹುದ್ದೆ ಭರ್ತಿ
ಮಾ.14ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.



