Connect with us

Dvgsuddi Kannada | online news portal | Kannada news online

ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಜೋರು ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಜೋರು ಮಳೆ ಮುನ್ಸೂಚನೆ

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿತದಂತೆ ಸೂಚಿಸಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top