Connect with us

Dvgsuddi Kannada | online news portal | Kannada news online

ಗುಡುಗು ಸಹಿತ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಗುಡುಗು ಸಹಿತ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು (ಜೂ.2) ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎರಡ್ಮೂರು ದಿನದಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ.

ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಇರಲಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ಕೇರಳ ರಾಜ್ಯ ಪ್ರವೇಶಿಸಿರುವ ನೈರುತ್ಯ ಮುಂಗಾರು, ಮುಂದಿನ ಎರಡ್ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ವ್ಯಾಪಿಸಲಿದೆ. ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಸುರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ರೈತರು ಜಮೀನು ಬಿತ್ತನೆಗೆ ಹದ ಮಾಡಿಕೊಂಡು ಕಾಯುತ್ತಿದ್ದಾರೆ. ಮುಂಗಾರು ಪ್ರವೇಶಿಸುತ್ತಿದ್ದಂತೆ ಬಿತ್ತನೆ ಕಾರ್ಯ ಚುರುಕು ಪಡೆದುಕೊಳ್ಳಲಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top