ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ.
ಅಧಿವೇಶನ ನಡೆಸುವ ಕುರಿತು ಈಗಾಗಲೇ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಇತ್ತೀಚೆಗೆ ವೆಳಗಾವಿ ಸುವರ್ಣ ವಿಧಾನಸೌಧಕ್ಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆ ಮಾಡುವಂತೆ ಸಹ ಸೂಚಿಸಿದ್ದಾರೆ.
ಈ ಬಾರಿಯ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ಜಿದ್ದಾಜಿದ್ದಿಗೆ ವೇದಿಕೆಯಾಗಲಿದೆ. ಮೂಡಾ, ವಾಲ್ಮೀಕಿ ಹಗರಣ, ಅಧಿಕಾರಿಗಳ ಆತ್ಮಹತ್ಯೆ, ಬೆಳೆ ಹಾನಿ ಪರಿಹಾರ, ರೈತರ ಜಮೀನಿಗೆ ವಕ್ಫ್ ನೋಟಿಸ್ ವಿಚಾರವನ್ನು ವಿಪಕ್ಷಗಳು ಚರ್ಚೆಗೆ ತರುವ ಸಾಧ್ಯತೆ ಇದೆ.