ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಗುಂಪುಗಳಿಗೆ ಅರ್ಥಿಕ ಬಲ ನೀಡಲು ಮುಂದಾಗಿದೆ. ಸ್ವಸಹಾಯ ಗುಂಪುಗಳಿಗೆ ಸರ್ಕಾರವು ಚಿಟ್ ಫಂಡ್ (chit fund) ವ್ಯವಸ್ಥೆ ಜಾರಿ ಮಾಡಲು ಚಿಂತನೆ ನಡೆಸಿದೆ.
ರಾಜ್ಯದ ವಿವಿಧ ಇಲಾಖೆಯಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ; ವಿಧಾನಸಭೆಗೆ ಸಿಎಂ ಮಾಹಿತಿ
ಈ ಕುರಿತು ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಕೇರಳ ಸರ್ಕಾರದ ಮಾದರಿಯಲ್ಲಿ ಎಂ.ಎಸ್.ಐ.ಎಲ್. (MSIL) ಮೂಲಕ ನಮ್ಮಲ್ಲೂ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಲಾಗುವುದು. ಇದರೊಂದಿಗೆ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ
ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿರಲಿದೆ. ಇದು ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆ: ಮಾ.15 ರಂದು ಐಟಿಐ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; ಮೇಳದ ಪೋಸ್ಟರ್ ಬಿಡುಗಡೆ