ದಾವಣಗೆರೆ: ಸಹಕಾರ ಇಲಾಖೆಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ (yashasvini yojane) ಹೊಸದಾಗಿ ನೋಂದಾಯಿಸಲು ಹಾಗೂ ನವೀಕರಣ ಮಾಡಲು ಜ.ನೋಂದಣಿ ಮಾಡಲು ಮಾ. 31 ಕೊನೆಯ ದಿನವಾಗಿದೆ. ಈ ಯೋಜನೆಯಡಿ 5 ಲಕ್ಷ ವರೆಗೆ ಚಿಕಿತ್ಸಾ ಸೌಲಭ್ಯ ಸಹಾಯಧನ ಪಡೆಯಬಹುದಾಗಿದೆ.
ದಾವಣಗೆರೆ: ವರದಕ್ಷಿಣೆ ಕಿರುಕುಳ; ಸೀರೆಯಿಂದ ಕುತ್ತಿಗೆಗೆ ಬಿಗಿದು ಪತ್ನಿಯನ್ನೇ ಕೊಲೆಗೈದ ಪತಿ
ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ (yashaswini network hospital) ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಇದರಲಿದೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ನೋಂದಾಯಿಸಬಹುದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.
ದಾವಣಗೆರೆ: ಈ ಭಾಗದಲ್ಲಿ ಸಂ.5ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ನಿಮ್ಮ ಹತ್ತಿರದ ಸಹಕಾರ ಸಂಘಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ
ನವೀಕರಣಕ್ಕೆ ಅಗತ್ಯ ದಾಖಲೆಗಳು
- ಯಶಸ್ವಿನಿ ಐಡಿ ಕಾರ್ಡು
- ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು).
ಹೊಸದಾಗಿ ನೋದಾಯಿಸಲು
- ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
- ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
- ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
- ಪ್ರತಿಯೊಬ್ಬರದ್ದು 2 ಫೋಟೋ
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.