Connect with us

Dvgsuddi Kannada | online news portal | Kannada news online

ಪದವೀಧರರಿಗೆ 3000, ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ 1500 ರೂ. ನೀಡುವ ಯುವನಿಧಿ‌ ಯೋಜನೆ ನೋಂದಣಿ ಶುರು; ಅರ್ಹತೆ ಏನು..? ಇಲ್ಲಿದೆ ಮಾರ್ಗಸೂಚಿ…

IMG 20231213 111512

ಪ್ರಮುಖ ಸುದ್ದಿ

ಪದವೀಧರರಿಗೆ 3000, ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ 1500 ರೂ. ನೀಡುವ ಯುವನಿಧಿ‌ ಯೋಜನೆ ನೋಂದಣಿ ಶುರು; ಅರ್ಹತೆ ಏನು..? ಇಲ್ಲಿದೆ ಮಾರ್ಗಸೂಚಿ…

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಶುರುವಾಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಎಕ್ಸ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದಿದ್ದಾರೆ.‌ ಈ ಸಂಬಂಧ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಯುವನಿಧಿ ಯೋಜನೆ ಯಾರು ಅರ್ಹರು..?

2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಯೋಜನೆ ಷರತ್ತು ಏನು?

  • ಈ ಯೋಜನೆಯು ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಅನ್ವಯವಾಗುತ್ತದೆ.
  • ಈ ಸೌಲಭ್ಯ ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು
  • ಈ ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು
  • ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು

ಯಾರು ಅನರ್ಹರು;

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸುವ ಯುವಜನರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ
  • ಅಪ್ರೈಂಟೈಸ್ ವೇತನ ಪಡೆಯುತ್ತಿರುವವರಿಗೆ ಅನ್ವಯವಾಗುವುದಿಲ್ಲ
  • ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರಿಗೆ ಅನ್ವಯಿಸುವುದಿಲ್ಲ
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕುಗಳಿಂದ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top