ಹುಬ್ಬಳ್ಳಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ಎಸ್.ಜಿ. ಟವರ್ಸ್‌ನ ಅಮೃತ ಡಿಲಕ್ಸ್ ಲಾಡ್ಜ್ ಮೇಲೆ ದಾಳಿ ನಡೆಸಿರುವ ಮೂವರು ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ದಾಳಿ ಮಾಡಿದ್ದು, ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಲಾಡ್ಜ್ ಮಾಲೀಕ ವೆಂಕಟೇಶ ನಾಯ್ಕ, ಮ್ಯಾನೇಜರ್ ವೀರೇಶ ಮುರ್ಡೇಶ್ವರ ಹಾಗೂ ಕೆ.ಎಂ. ಪ್ರದೀಪಗೌಡ ಮಂಜುನಾಥಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಬೆಂಗಳೂರು, ಮುಂಬೈ ಹಾಗೂ ಕೋಲ್ಕತ್ತದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.