Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು ಆಮಿಷಗಳಿಗೆ ಒಳಗಾಗಬಾರದು: ಶಾಮನೂರು ಶಿವಶಂಕರಪ್ಪ

ದಾವಣಗೆರೆ

ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು ಆಮಿಷಗಳಿಗೆ ಒಳಗಾಗಬಾರದು: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಗ್ರಾಮ ಪಂಚಾಯಿತಿ ಅಧ್ಯಕ್ಷಗಾದಿಗೆ ಏರಲು ಅನೇಕ ಆಮಿಷ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇಂತಹ ಯಾವುದೇ ಆಸೆ- ಆಮಿಷಗಳಿಗೆ ಒಳಗಾಗಬಾರದು ಎಂದು ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಕರೆ ನೀಡಿದರು.

ದಾವಣಗೆರೆ ಉತ್ತರ -ದಕ್ಷಿಣ ಮತ್ತು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೇರೆ ಪಕ್ಷಕ್ಕಿಂತ ಹೆಚ್ಚು ಸ್ಥಾನ ಗಳಿಸಿದ್ದೇವೆ. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಈ ಬಾರಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಮಿಷಕ್ಕೆ ಒಳಗಾಗದೇ ಕಾಂಗ್ರೆಸ್ ಸದಸ್ಯ ಅಧಿಕಾರ ಹಿಡಿಯುಂತೆ ಮಾಡಿ ಎಂದು ತಿಳಿಸಿದರು.

ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆ ಕಿತ್ತಾಟಗಳು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಸದಸ್ಯರು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿತರೇ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕು.

ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.

ಕೆಪಿಸಿಸಿ ವಕ್ತಾರ ಡಿ. ಬಸವರಾಜ್ , ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ , ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಕರಿಬಸಪ್ಪ, ಕೆ.ಜಿ.ಬಸವನಗೌಡ, ಎಪಿಎಂಸಿ ಅಧ್ಯಕ್ಷ ಎಸ್‌.ಕೆ.ಚಂದ್ರಶೇಖರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ.ಶಿವಗಂಗಾ, ಮುಖಂಡರಾದ ಮುದೇಗೌಡ್ರ ಗಿರೀಶ್, ಬಿ.ಎಚ್. ವೀರಭದ್ರಪ್ಪ, ಖಾಲಿದ್ ಅಹಮದ್, ಜಿ.ಸಿ. ನಿಂಗಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top