Connect with us

Dvgsuddi Kannada | online news portal | Kannada news online

ನಾಳೆ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ

ಪ್ರಮುಖ ಸುದ್ದಿ

ನಾಳೆ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿನಾಳೆ ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ರಾಜ್ಯದ 113 ತಾಲೂಕು ಗಳಲ್ಲಿ 3,019 ಗ್ರಾಮಪಂಚಾಯಿತಿಗಳಿಗೆ, ಒಟ್ಟು 48,048 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ
ಚುನಾವಣೆ ನಡೆಯುತ್ತಿದೆ.

ಒಟ್ಟು 1,64,550 ನಾಮಪತ್ರ ಸಲ್ಲಿಕೆ ಆಗಿದೆ. 40,352 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು,  432 ಸ್ಥಾನಗಳು ನಾಮಪತ್ರ ಸಲ್ಲಿಕೆ ಮಾಡದೆ ಖಾಲಿ ಉಳಿದಿವೆ. ಅಂತಿಮವಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತಯಂತ್ರ(ಇವಿಎಂ) ಬಳಕೆ ಮಾಡಲಾಗುತ್ತಿದ್ದು, ಉಳಿದೆಡೆ ಮತಪತ್ರಗಳ ಮೂಲವೇ ಚುನಾವಣೆ ನಡೆಯಲಿವೆ.

ಮತದಾನದ ವೇಳೆ ಕೋವಿಡ್ ಹರಡದಂತೆ ಮುನ್ನೆಚ್ಚಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರು ಮತದಾನ ಮಾಡಲು ಕೊನೆಯ 1 ಗಂಟೆ ಅವಕಾಶ ನೀಡಲಾಗುವುದು. ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, 5847 ಚುನಾವಣಾ ಅಧಿಕಾರಿ ಹಾಗೂ 6085 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಿದೆ.

45, 128 ಮತಗಟ್ಟೆಗಳಿಗೆ ಸುಮಾರು 2,70,268 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಈ ಬಾರಿ 45 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತಗಟ್ಟೆ ಪ್ರವೇಶಿಸಬೇಕು.

ಕೋವಿಡ್ ಸೋಂಕಿತರು ಮತ್ತು ಶಂಕಿತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ ಮತದಾನ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆ ಪಕ್ಷಗಳ ಆಧಾರ ರಹಿತವಾಗಿ ನಡೆಯಲಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಆದ್ದರಿಂದ, ರಾಜಕೀಯ ಪಕ್ಷಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಎಲ್ಲಾ ರಾಜಕೀಯ ಪಕ್ಷದ ಮುಖಂಡರಿಗೆ ಹಾಗೂ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳು ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯ ಚುನಾವಣಾ ಆಯೋಗದ ಜೊತೆ ಸಹಕಾರ ನೀಡಬೇಕಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top