ಮಂಡ್ಯ: ಈಜಲು ಕೃಷಿ ಹೊಂಡದ ಬಳಿ ಹೋಗಿದ್ದ ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಬಾಲಕ ಈಜಲು ಕೃಷಿ ಹೊಂಡಕ್ಕೆ ತೆರಳಿದ್ದರು. ಚಂದನ್ ಕಾರ್ತಿಕ್ ಹಾಗೂ ರೀತೇಶ್ ಸಾವನ್ನಪ್ಪಿದ ಮಕ್ಕಳಾಗಿದ್ದಾರೆ. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



