Connect with us

Dvgsuddi Kannada | online news portal | Kannada news online

ಕೆಪಿಟಿಸಿಎಲ್ 1899  ಕಿರಿಯ ಪವರ್ ಮ್ಯಾನ್  ಹುದ್ದೆ ಭರ್ತಿಗೆ ಚಾಲನೆ

ಪ್ರಮುಖ ಸುದ್ದಿ

ಕೆಪಿಟಿಸಿಎಲ್ 1899  ಕಿರಿಯ ಪವರ್ ಮ್ಯಾನ್  ಹುದ್ದೆ ಭರ್ತಿಗೆ ಚಾಲನೆ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಇಂಧನ  ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.  ಕೆಪಿಟಿಸಿಎಲ್ ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು. ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದಾಗ ನಾನು ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ. ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ, ಅತ್ಯಂತ ಶೀಘ್ರದಲ್ಲೇ ಉಳಿದ 1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಅವರು ತಿಳಿಸಿದರು.

ನಮ್ಮ ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ. ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ ಎಂದು ಅವರು ಹೇಳಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top