ಬೆಂಗಳೂರು: ಶಿವಮೊಗ್ಗದಲ್ಲಿ ವೀರ ಸಾವರ್ಕರ್-ಟಿಪ್ಪು ಸುಲ್ತಾನ್ ಪೋಸ್ಟರ್ ಗೆ ಸಂಬಂಧಪಟ್ಟಂತೆ ಉಂಟಾಗಿರುವ ಘರ್ಷಣೆ ಈಗ ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿಬೇಕಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದು. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದ್ರೆ ಟಿಪ್ಪು ಫೋಟೋ ಏಕೆ ತೆಗೆಯುತ್ತಾರೆ. ಹೀಗೆ ಮಾಡಿದ್ರೆ ಗಲಭೆ ಆಗುವುದಿಲ್ಲವೇ ..? ಎಂದು ಪ್ರಶ್ನಿಸಿದ್ದಾರೆ.
ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ತೂಗ್ತಾರೆ. ಘಟನೆಯಲ್ಲಿ ಎಸ್‍ಡಿಪಿಐ ಇದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೇ ಇದೆ. ಎಸ್‍ಡಿಪಿಐ, ಪಿಎಫ್‍ಐ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಅಂತ ನಿಮ್ಮ ಬಳಿ ದಾಖಲೆ ಇದ್ದರೆ ಕ್ರಮ ತೆಗೆದುಕೊಳ್ಳಲಿ ಎಂದರು.



