ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ(ಪಿಡಿಒ) ಸವಿತಾ ಯರೇಸೀಮೆ 55 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಕಂದಾಯ ಇಲಾಖೆಯ ಇ-ಸ್ವತ್ತಿನ ಪಹಣಿ ಮತ್ತು ಖಾತಾ ಬದಲಾವಣೆಗಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರ ಲಂಚದ ಹಣ ಜತೆ ಅಕ್ರಮವಾಗಿ ಕಚೇರಿಯಲ್ಲಿ ಇಟ್ಟುಕೊಂಡಿದ್ದ 30 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪಿಡಿಒ ಸವಿತಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಪ್ರಭಾವತಿ ಶೇತಸನದಿ, ಬಸವರಾಜ ಬುದ್ನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.