Connect with us

Dvgsuddi Kannada | online news portal | Kannada news online

55 ಸಾವಿರ ಲಂಚ ಸ್ವೀಕರಿಸುವಾಗಲೇ ಎಸಿಬಿ ಬಲೆಗೆ ಬಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

ದಾವಣಗೆರೆ

55 ಸಾವಿರ ಲಂಚ ಸ್ವೀಕರಿಸುವಾಗಲೇ ಎಸಿಬಿ ಬಲೆಗೆ ಬಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ(ಪಿಡಿಒ) ಸವಿತಾ ಯರೇಸೀಮೆ 55 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಕಂದಾಯ ಇಲಾಖೆಯ ಇ-ಸ್ವತ್ತಿನ ಪಹಣಿ ಮತ್ತು ಖಾತಾ ಬದಲಾವಣೆಗಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರ ಲಂಚದ ಹಣ ಜತೆ ಅಕ್ರಮವಾಗಿ ಕಚೇರಿಯಲ್ಲಿ ಇಟ್ಟುಕೊಂಡಿದ್ದ 30 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪಿಡಿಒ ಸವಿತಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ‌‌. ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್‌. ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಪ್ರಭಾವತಿ ಶೇತಸನದಿ, ಬಸವರಾಜ ಬುದ್ನಿ  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top