Connect with us

Dvgsuddi Kannada | online news portal | Kannada news online

ನಾಳೆ ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ 10 ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

ಪ್ರಮುಖ ಸುದ್ದಿ

ನಾಳೆ ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ 10 ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

ಬೆಂಗಳೂರು: ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ನಗರ ಸ್ಥಳೀಯ ಸಂಸ್ಥೆ  ಚುನಾವಣೆ ಫಲಿತಾಂಶ ನಾಳೆ ನಡೆಯಲಿದೆ.

10 ನಗರ ಸ್ಥಳೀಯ ಸಂಸ್ಥೆಗಳಿಗೆ ಏ. 27ರಂದು ಸಾರ್ವತ್ರಿಕ ಚುನಾವಣೆ  ನಡೆದಿತ್ತು. ಆಯಾ ನಗರ ಸ್ಥಳೀಯ ಸಂಸ್ಥೆಗಳ ಕೇಂದ್ರಸ್ಥಾನದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ ವೇಳೆಗೆ ಅಧಿಕೃತ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್ ಗಳಲ್ಲಿ ಶೇ.56.19 ರಷ್ಟು, ವಿಜಯಪುರ ಪುರಸಭೆಯ 25 ವಾರ್ಡ್ ಗಳಲ್ಲಿ ಶೇ.79.53 ರಷ್ಟು, ರಾಮನಗರ ನಗರಸಭೆಯ 31 ವಾರ್ಡ್ ಗಳಲ್ಲಿ ಶೇ. 75ರಷ್ಟು ಹಾಗೂ ಚನ್ನಪಟ್ಟಣ ನಗರಸಭೆಯ 31 ವಾರ್ಡ್ ಗಳಲ್ಲಿ ಶೇ.73.10ರಷ್ಟು ಮತದಾನವಾಗಿತ್ತು ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ‌.

ಗುಡಿಬಂಡೆ ಪಟ್ಟಣ ಪಂಚಾಯ್ತಿಯ 11 ವಾರ್ಡ್ ಗಳಲ್ಲಿ ಶೇ.71.60, ಭದ್ರಾವತಿ ನಗರಸಭೆಯ 35 ವಾರ್ಡ್ ಗಳಲ್ಲಿ ಶೇ.62.54, ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಯ 15 ವಾರ್ಡ್ ಗಳಲ್ಲಿ ಶೇ.76.33, ಬೇಲೂರು ಪುರಸಭೆಯ 23 ವಾರ್ಡ್ ಗಳಲ್ಲಿ ಶೇ.83.30, ಬೀದರ್ ನಗರಸಭೆಯ 35 ವಾರ್ಡ್ ಗಳಲ್ಲಿ ಶೇ.52 ಹಾಗೂ ಮಡಿಕೇರಿ ನಗರಸಭೆಯ 23 ವಾರ್ಡ್ ಗಳಲ್ಲಿ ಶೇ.59.01 ರಷ್ಟು ಮತದಾನವಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ. ಉಪಚುನಾವಣೆ ನಡೆದ ಹಳ್ಳಿಖೇಡ ಪುರಸಭೆಯ 11 ವಾರ್ಡ್ ಗಳಲ್ಲಿ ಶೇ.83.10 ಹಾಗೂ ಹಿರೇಕೆರೂರು ಪಟ್ಟಣ ಪಂಚಾಯ್ತಿಯ ಒಂದು ವಾರ್ಡ್ ನಲ್ಲಿ ಶೇ.76.77ರಷ್ಟು ಮತದಾನವಾಗಿದೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top