ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ನಾಳೆ (ಜ. 27) ಕೌನ್ಸೆಲಿಂಗ್ ನಡೆಯಲಿದೆ. ನಾಳೆಯಿಂದ ಜ.30ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
ಒಟ್ಟು 10,636 ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೇಮಕಾತಿ ನಡೆಯಲಿದ್ದು, ಜೇಷ್ಠತೆ ಆಧಾರದಲ್ಲಿ ತಮಗೆ ಬೇಕಾದ ಕಾಲೇಜು ಆಯ್ಕೆ ಮಾಡಿಕೊಳ್ಳಬಹುದು. ನೇಮಕವಾದ ಬಳಿಕ ಎರಡು ದಿನಗಳಲ್ಲಿ ವರದಿ ಮಾಡಿಕೊಳ್ಳಬೇಕಿದೆ. ಮೂಲ ದಾಖಲೆ ಪರಿಶೀಲನೆಗೆ ಒಪ್ಪಿಸಿ ಕೆಲಸಕ್ಕೆ ಹಾಜರಾಗಬೇಕು. ದಾಖಲೆ ಸರಿಯಿಲ್ಲದಿದ್ದರೆ ಅಂತವರನ್ನು ಕೈ ಬಿಡಲಾಗುವುದು ಎಂದು ಹೇಳಲಾಗಿದೆ.



