ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಿಯಲ್ಲಿ (KPTCL) ಖಾಲಿ ಇರುವ 622 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಶಕ್ತಿಭವನದಲ್ಲಿ ಶುಕ್ರವಾರ ನಡೆದ ನಿಗಮದ ನಿರ್ದೇಶಕರ ಆಡಳಿತ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಟಿಸಿಎಲ್ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ. ಹೈಕೋರ್ಟ್ ನಿರ್ದೆಶನದಂತೆ 296 ಸಹಾಯಕ ಇಂಜಿನಿಯರ್, 208 ಕಿರಿಯ ಇಂಜಿನಿಯರ್, ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಸೇರಿ 622 ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ. 622 ಹುದ್ದೆಗಳ ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲು ಕ್ರಮಕೈಗೊಳ್ಳಲು ಸೂಚಿಸಿದರು.
ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 622 ಹುದ್ದೆ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



