Connect with us

Dvgsuddi Kannada | online news portal | Kannada news online

ಹೊಸದಾಗಿ 3,988 ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಮುಖ ಸುದ್ದಿ

ಹೊಸದಾಗಿ 3,988 ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಿದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ 20ರಷ್ಟು ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ 30ರಷ್ಟಿರುತ್ತದೆ. ಸಹಾಯಧನ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಕಟ್ಟಡ ಕಾರ್ಯ ಪ್ರಗತಿಯಲ್ಲಿದ್ದ 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊoಡಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top