ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ದೇವಮ್ಮ(62), ರೇಷ್ಮಾ(27) ಮೃತಪಟ್ಟವರು. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



