Connect with us

Dvgsuddi Kannada | online news portal | Kannada news online

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ಕಂದಾಯ ಇಲಾಖೆಯಲ್ಲಿ 3 ಸಾವಿರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

govt

ಪ್ರಮುಖ ಸುದ್ದಿ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ಕಂದಾಯ ಇಲಾಖೆಯಲ್ಲಿ 3 ಸಾವಿರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ 3 ಸಾವಿರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ‍ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

3 ಸಾವಿರ ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, 2022 ಜನವರಿ 21  ಸಂಜೆ 5 ಗಂಟೆ  ವರಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ರೂ.1000 ಆಗಿದೆ. ಕನಿಷ್ಟ ಪದವಿಪೂರ್ವ ಶಿಕ್ಷಣ(ಪಿಯುಸಿ) ಅಥವಾ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿಬಿಎಸ್‍ಸಿ ಅಥವಾ ಐಸಿಎಸ್‍ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದೆಂತೆ ಅಂಕ ಪಡೆದು ಉತ್ತೀರ್ಣರಾಗಿರಬೇಕು.  ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ಅಥವಾ ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.  ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೇಯಲ್ಲಿ ಪದವಿಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುಬೇಕು. ವಯೋಮಿತಿ ಕನಿಷ್ಟ 18 ವರ್ಷ, ಗರಿಷ್ಟ 65 ವರ್ಷ ಮೀರಿರಬಾರದು. ಅರ್ಹತಾ ಷರತ್ತುಗಳು, ಆಯ್ಕೆಯ ವಿಧಾನ, ತರಬೇತಿ ಸೇರಿದಂತೆ ಇತರೆ ಸೂಚನೆಗಳಿಗೆ ಇಲಾಖಾ ವೆಬ್‍ಸೈಟ್‍ http://rdservices.karnataka.gov.in  ಮಾಹಿತಿ ಪಡೆಯಬಹುದು.

ಉಡುಪಿ 131, ಉತ್ತರಕನ್ನಡ 101, ಕೊಡಗು 100, ಕೊಪ್ಪಳ 66, ಕೋಲಾರ 137, ಗದಗ 46, ಕಲಬುರಗಿ 12, ಚಿಕ್ಕಬಳ್ಳಾಪುರ 39, ಚಿಕ್ಕಮಗಳೂರು 112, ಚಿತ್ರದುರ್ಗ 93, ಚಾಮರಾಜನಗರ 50, ತುಮಕೂರು 334, ದಕ್ಷಿಣ ಕನ್ನಡ 66, ದಾವಣಗೆರ 183, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು 65, ವಿಜಯಪುರ 76, ಬೆಳಗಾವಿ 112, ಬಳ್ಳಾರಿ 27, ವಿಜಯನಗರ 29, ಬಾಗಲಕೋಟೆ 60, ಬೀದರ್ 13, ಮಂಡ್ಯ 195, ಮೈಸೂರು 136, ಯಾದಗಿರಿ 45, ರಾಮನಗರ 155, ರಾಯಚೂರು 54, ಶಿವಮೊಗ್ಗ 127, ಹಾವೇರಿ 299, ಹಾಸನ 136 ಸೇರಿ ಒಟ್ಟು 3000 ಹುದ್ದೆಗಳ ನೇಮಕಾತಿ ನಡೆಯಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top