Connect with us

Dvgsuddi Kannada | online news portal | Kannada news online

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; ಶೇ.73.40ರಷ್ಟು ವಿದ್ಯಾರ್ಥಿಗಳು ಪಾಸ್ ; 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಪ್ರಥಮ

ಪ್ರಮುಖ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; ಶೇ.73.40ರಷ್ಟು ವಿದ್ಯಾರ್ಥಿಗಳು ಪಾಸ್ ; 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಪ್ರಥಮ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಮೇ 09) ಪ್ರಕಟವಾಗಿದ್ದು, ಶೇ 73.40 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಫಲಿತಾಂಶ ಮಾಹಿತಿ ನೀಡಿದರು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ತಿಳಿಸಿದರು.

ಅಂಕಿತಾ ರಾಜ್ಯಕ್ಕೆ ಪ್ರಥಮ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

ಉಡುಪಿ ಜಿಲ್ಲೆಗೆ ಫಸ್ಟ್ , ಯಾದಗಿರಿ ಲಾಸ್ಟ್: ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ತೇರ್ಗಡೆ ಪ್ರಮಾಣ ಶೇ 50.59 ದಾಖಲಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top