ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2022 ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಸರ್ವ ಸದಸ್ಯರ ವಿಶೇಷ ಮಹಾಸಭೆಯನ್ನು ಆಯೋಜಿಸಲಾಗಿದೆ. ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ರಸ್ತೆಯಲ್ಲಿರುವ ಮಹಾವೀರ ಸಮುದಾಯ ಭವನದಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸಂಘದ ಸರ್ವ ಸದಸ್ಯರು ಭಾಗವಹಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ತಿಳಿಸಿದ್ದಾರೆ.
ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ



