ಬೆಂಗಳೂರು: ಸಾರಿಗೆ ನೌಕರರ ವೇತನ ವಿಚರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ವೇತನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದರು. ಇದೀಗ ನೌಕರರಿಗೆ ಸಿಎಂ ಸಿಹಿ ಸುದ್ದಿ ನೀಡಿದ್ದು, ಮೂರು ತಿಂಗಳ ವೇತನ ಬಿಡುಗಡೆ ಮಾಡಿದ್ದಾರೆ.
ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಮೂರು ತಿಂಗಳ ವೇತನ 634 ಕೋಟಿ ರೂಪಾಯಿ ತಕ್ಷಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಸಾರಿಗೆ ಸಿಬ್ಬಂದಿಗಳಿಗೆ ವೇತನ ಸಿಗಲಿದೆ.
ಈ ಕುರಿತು ಮಾತನಾಡಿರುವ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನ ಬಿಡುಗಡೆಗೆ ಸರ್ಕಾರ ಸ್ಪಂದಿಸಿದ್ದು, ತಕ್ಷಣ ಹಣ ಬಿಡುಗಡೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಕೆಎಸ್‌ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳ ಶೇ.75 ರಷ್ಟು ವೇತನದ ಮೊತ್ತ 634.50 ಕೋಟಿ ರೂಪಾಯಿಗಳನ್ನು ಬಿಡುಗಡೆಗೆ ಸೂಚಿಸಿದ್ದಾರೆ.



