ದಾವಣಗೆರೆ; ಕೇಂದ್ರೀಯ ಸೈನಿಕ ಮಂಡಳಿಯು ( Kendriya Sainik Board Secretariat) ಸೇನೆಯ ಜೆ.ಸಿ.ಓ ರ್ಯಾಂಕ್‍ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಕೇಂದ್ರೀಯ ಸೈನಿಕ ಮಂಡಳಿಯಿಂದ ಸಹಾಯಧನ
- ಮಾಜಿ ಸೈನಿಕರ ಮಕ್ಕಳ ಶಿಕ್ಷಣಕ್ಕೆ ನೆರವು
- ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ
- ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
- ನವೆಂಬರ್ 30 ಕೊನೆ ದಿನ
ಆಸಕ್ತರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸತ್ಕದ್ದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.



