ಕಿತ್ತೂರು ರಾಣಿ ಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆಗೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಪ್ರಶಸ್ತಿ ಪ್ರದಾನವನ್ನು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳದಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ, ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪದಾಧಿಕಾರಿಗಳು ಸ್ವೀಕರಿಸಬಹುದಾಗಿದೆ.

ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು 18 ರಿಂದ 45 ವಯೋಮಿತಿಯೊಳಗಿರಬೇಕು. ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು, ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದ್ದಲ್ಲಿ ಅಂತಹ ಮಹಿಳೆಯನ್ನು ವೀರಮಹಿಳೆ ಎಂದು ಪರಿಗಣಿಸಬಹುದು. ವೀರಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆ ಮಾಡಿರಬೇಕು. ಈ ಕುರಿತು ದಿನ ಪತ್ರಿಕೆ ಹಾಗೂ ಪೊಲೀಸ್ ಠಾಣೆಯ ವರದಿ ಪ್ರತಿ ಸಲ್ಲಿಸಬೇಕು. ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31 ರೊಳಗೆ ಇರಬೇಕು. ಪ್ರಶಸ್ತಿಗೆ ಸಂಬಂಧಿಸಿದ ಮಹಿಳೆಯ ತಂದೆ, ತಾಯಿ, ಪೋಷಕರು ಅರ್ಜಿ ಸಲ್ಲಿಸಬಹುದು. ವೀರಮಹಿಳೆ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25 ಸಾವಿರಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.

ಪ್ರಶಸ್ತಿಗಾಗಿ ನಿರ್ದಿಷ್ಟ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಬಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಈ ಕಚೇರಿಯಲ್ಲಿ ಪಡೆಯಬಹುದಾಗಿದೆ. ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಈ ಕಚೇರಿಯಲ್ಲಿ ಅ.11 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-264056 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *