Connect with us

Dvgsuddi Kannada | online news portal | Kannada news online

ಈ ಬಾರಿಯ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ

ಪ್ರಮುಖ ಸುದ್ದಿ

ಈ ಬಾರಿಯ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ

ವಿಜಯನಗರ: ಫೆ‌.23ರಿಂದ 26ರವರೆಗೆ ನಡೆಯುವ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವಕ್ಕೆ  ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್​ ಪಿ. ಶ್ರವಣ್ ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಕರೊನಾ ಪ್ರಕರಣ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಈ ನಡುವೆ ಕೊಟ್ಟೂರೇಶ್ವರ ಭಕ್ತಾದಿಗಳಿಗೆ ಬೇಸರ ಮೂಡಿಸುವ ಸಂಗತಿಯೊಂದು ಹೊರಬಿದ್ದಿದೆ. ಜಾತ್ರಾ ಮಹೋತ್ಸವಕ್ಕೆ  ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.  ವಿಜಯನಗರ ಜಿಲ್ಲೆಯ ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ಪ್ರತಿವರ್ಷ ಲಕ್ಷಾಂತರ ಜನ ಪಾಲ್ಗೊಳ್ಳುವ ಮೂಲಕ ಅದ್ಧೂರಿಯಾಗಿ ನಡೆಯುತ್ತದೆ.

ಈ ಸಲ ಕರೊನಾ ಸೋಂಕು ಹಬ್ಬುವ ಭೀತಿಯಿಂದ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆ ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟ.  ಹೀಗಾಗಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top