ಕೊಟ್ಟೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಅದ್ಧೂರಿಯಾಗಿ ನಡೆಯಲಿದೆ.
ಇಂದು (ಜ.29)ಮಠಾಧೀಶರ ಚಿಂತನ ಗೋಷ್ಠಿ ನಡೆಯಲಿದೆ. ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಪ್ರಸನ್ನಾನಂದಪುರಿ ಸ್ವಾಮೀಜಿ, ಚೌಡಯ್ಯ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮಹಾಂತ ಬಸವಲಿಂಗ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ, ಸವಿತಾನಂದ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.



