ಬೆಂಗಳೂರು : ನಾಳೆ ನಡೆಯಬೇಕಿದ್ದ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೆಪಿಎಸ್ ಸಿ ತಿಳಿಸಿದೆ.
1,114 ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. 3.74 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ಸೋರಿಕೆ ಮಾಡಿದವರನ್ನು ಬಂಧಿಸಲಾಗಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆಯಾಗಿದೆ. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಎಸ್ ಸಿ ಕಾರ್ಯದರ್ಶಿ ಸತ್ಯವತಿ ತಿಳಿಸಿದ್ದಾರೆ.



