Connect with us

Dvgsuddi Kannada | online news portal | Kannada news online

FDA ಪ್ರಶ್ನೆ ಪತ್ರಿಕೆ ಸೋರಿಕೆ ; KPSC ಮತ್ತಿಬ್ಬರು ಸಿಬ್ಬಂದಿ ಬಂಧನ

ಪ್ರಮುಖ ಸುದ್ದಿ

FDA ಪ್ರಶ್ನೆ ಪತ್ರಿಕೆ ಸೋರಿಕೆ ; KPSC ಮತ್ತಿಬ್ಬರು ಸಿಬ್ಬಂದಿ ಬಂಧನ

ಬೆಂಗಳೂರು: ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮಹತ್ವದ ಪ್ರಗತಿ ಸಾಸಿದ್ದು, ಸೋರಿಕೆಯ ಮೂಲವನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ಕರ್ನಾಟಕ ಲೋಕಸೇವಾ ಆಯೋಗದ ಮತ್ತಿಬ್ಬರು ಸಿಬ್ಬಂದಿಗಳನ್ನು ಬಂಧಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ರಮೇಶ್, ಪರೀಕ್ಷಾ ವಿಭಾಗದಲ್ಲಿ ಶೀಘ್ರ ಲಿಫಿಗಾರರಾಗಿರುವ ಸನಾಬೇಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸನಾಬೇಡಿ ಪರೀಕ್ಷಾ ವಿಭಾಗದ ನಿಯಂತ್ರಕರಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ ರಮೇಶ್‍ಗೆ ನೀಡಿದ್ದಾರೆ. ಈತ ಚಂದ್ರು ಸೇರಿದಂತೆ ಇತರ ಆರೋಪಿಗಳಿಗೆ ಹಂಚಿಕೆ ಮಾಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಿರುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.ಕಳೆದ ಎರಡು ದಿನಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲದ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರು ಈವರೆಗೂ 16 ಮಂದಿಯನ್ನು ಬಂಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top