Connect with us

Dvgsuddi Kannada | online news portal | Kannada news online

ಜನ ಸಾಮಾನ್ಯರಿಗೆ ತೆರಿಗೆ ಹೆಚ್ಚಳ ಬರೆ; ಆಸ್ತಿ ತೆರಿಗೆ ಹೆಚ್ಚಳಕ್ಕೆ ಮುಂದಾದ ಸರ್ಕಾರ

ಪ್ರಮುಖ ಸುದ್ದಿ

ಜನ ಸಾಮಾನ್ಯರಿಗೆ ತೆರಿಗೆ ಹೆಚ್ಚಳ ಬರೆ; ಆಸ್ತಿ ತೆರಿಗೆ ಹೆಚ್ಚಳಕ್ಕೆ ಮುಂದಾದ ಸರ್ಕಾರ

ಬೆಂಗಳೂರು:  ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೇ ಆಸ್ತಿ ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.  ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಯೋಜನೆ ರೂಪಿಸಿದ್ದು,   ಈಗಿರುವ ಶೇ.15ರಷ್ಟು  ತೆರಿಗೆಯನ್ನು 30ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಿದರೆ ನಗರ ಸ್ಥಳೀಯ ಸಂಸ್ಥೆಗಳ ಜನರ ಮೇಲೆ ಆರ್ಥಿಕ ಹೊರೆಯಾಗುವ ಸಾಧ್ಯತೆ ಇದೆ. ಈವರೆಗೂ ಶೇ.15ರಷ್ಟು ಇರುವ ಆಸ್ತಿ ತೆರಿಗೆಯನ್ನು ಶೇ.30ಕ್ಕೆ ಹೆಚ್ಚಾಗಲಿದೆ.

ಕಳೆದ ವರ್ಷ ಜನವರಿ ವೇಳೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ನಿಧರಿಸಲಾಗಿತ್ತು. ಬಹಳಷ್ಟು ಕಡೆ ವಿರೋಧ ವ್ಯಕ್ತವಾಗಿದ್ದರಿಂದ ಹಂತ ಹಂತವಾಗಿ ಜಾರಿಗೆ ತರುವ ಪ್ರಯತ್ನ ನಡೆದಿತ್ತು. ಅಷ್ಟರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಆಸ್ತಿ ತೆರಿಗೆ ಹೆಚ್ಚಳವನ್ನು ಕೈ ಬಿಡಲಾಗಿತ್ತು. ಈಗ ಮತ್ತೆ ತೆರಿಗೆ ಹೆಚ್ಚಿಸಲು ತಯಾರಿ ನಡೆದಿದೆ ಎನ್ನಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top