ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರು ಹೊರವಲಯದ ಸಿದ್ದಗಂಗಾ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಒಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಆಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಇರಕಸಂದ್ರ ದಂಪತಿಗಳಾಗಿದ್ದಾರೆ.
ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿದ್ದಾರೆ.



