Connect with us

Dvgsuddi Kannada | online news portal | Kannada news online

 ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 155 ಎಸ್ ಡಿಎ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

 ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 155 ಎಸ್ ಡಿಎ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 155 ಬ್ಯಾಕ್ ಲಾಗ್  ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಜಲ ಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್​ ಸೈಟ್​ Waterresources.Karnataka.Gov.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು: ಒಟ್ಟು  155 ಹುದ್ದಗಳಿಗೆ ಅರ್ಜಿ ಆಹ್ವಾನಿಸಿದ್ದು,  ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಮತ್ತು ವಿಶ್ವವಿದ್ಯಾಲಯದಿಂದ ಪಿಯುಸಿ, ಡಿಪ್ಲೋಮಾ, ಐಟಿಐ ಮಾಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 40 ವರ್ಷದಳೊಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.  ವೇತನ:ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 21,400/- ರಿಂದ 42,000/-ರೂ.ವರೆಗೆ ಸಂಬಳ ನಿಗದಿ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25, 2022. ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಆಯ್ಕೆ ಪ್ರಕ್ರಿಯೆ: ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top