Connect with us

Dvgsuddi Kannada | online news portal | Kannada news online

ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

karnataka police 22

ಪ್ರಮುಖ ಸುದ್ದಿ

ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್  ಹುದ್ದೆ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್  ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ನೇಮಕಾತಿ ಜಾಲತಾಣ https://ksp.karnataka.gov.in/ ಅಥವಾ https://ksp-recruitment.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಹುದ್ದೆಗಳ ವಿವರ
  • ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಸಾಮಾನ್ಯ ಪುರುಷ ) ( ಸಿಎಆರ್ / ಡಿಎಆರ್) – 2,996
  • ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಪುರುಷ ತೃತೀಯ ಲಿಂಗ) ( ಸಿಎಆರ್/ಡಿಎಆರ್) – 68
  •  ಒಟ್ಟು 3064 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ
  • ವಯೋಮಿತಿ
  • ಪುರುಷ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು
  • ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ
  • ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ
  • ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ

ವಿದ್ಯಾರ್ಹತೆ: ಎಸ್‌ಎಸ್ ಎಲ್ ಸಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದಲ್ಲದೇ ಸಿಬಿಎಸ್ ಇ ಮತ್ತು ಐ ಸಿ ಎಸ್ ಇ ಮಂಡಳಿಯು ನಡೆಸುವ 10ನೇ ಕ್ಲಾಸ್ ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ, ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ ಕೆ ಒಎಸ್ ಪಾಸ್ ಆಗಿದ್ದವರು ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:  ರೂ.23,500 ರಿಂದ ರೂ.47,650. ಆಯ್ಕೆಯ ವಿಧಾನ:  ಲಿಖಿಂತ ಪರೀಕ್ಷೆಯಲ್ಲಿ ತೇರ್ಗಡೆಯಾದವರಲ್ಲಿ 1:5 ಅನುಪಾತದಲ್ಲಿ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಯಲ್ಲಿ ಪಾಸ್ ಆದವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.400 , ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200 . ಈ ಹುದ್ದೆಗಳಿಗೆ ದಿನಾಂಕ 19-09-2022ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2022 ಆಗಿರುತ್ತದೆ. ಆನ್ ಲೈನ್ ಮೂಲಕ, ಅಧಿಕೃತ ಬ್ಯಾಂಕ್ ಚಲನ್ ಗಳ ಮೂಲಕ, ಸ್ಥಳೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 03-11-2022 ಆಗಿದೆ. ಹೆಚ್ಚಿನ ಮಾಹಿತಿಗೆ  https://ksp.karnataka.gov.in/ ಅಥವಾ https://ksp-recruitment.in/ ಜಾಲತಾಣಕ್ಕೆ ಭೇಟಿ ನೀಡಿ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top