ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ `ಅರಿಶಿಣ ಗಣೇಶ’ ಅಭಿಯಾನ; ಆಕರ್ಷಕ ಗಣಪ ತಯಾರಿಸಿ ಬಹುಮಾನ ಗೆಲ್ಲಿ..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಸಕ್ತ ಸಾಲಿನಲ್ಲಿ ಇದೇ ಸೆ.10 ರಂದು ಆಚರಿಸಲಿರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾನ್ನಾಗಿಸಲು ‘ಅರಿಶಿನ ಗಣಪತಿದೊಂದಿಗೆ ಪರಿಸರ ಸ್ನೇಹಿ ಹಬ್ಬ ಆಚರಿಸುವ ಅಭಿಯಾನ ಹಮ್ಮಿಕೊಂಡಿದೆ.

ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳ ತಯಾರಿಕೆ ಮತ್ತು ಬಳಕೆಯನ್ನು ನಿಷೇಧಿಸಿದೆ. ಅಲ್ಲದೆ ಈ ಕುರಿತು ಉಚ್ಚನ್ಯಾಯಾಲಯದ ನಿರ್ದೇಶನ ಕೂಡ ಇರುತ್ತದೆ ಕೋವಿಡ್-19 ಹಿನ್ನಲೆಯಿಂದಾಗಿ ಸ್ವಚ್ಚತೆ ಕಾಪಾಡುವುದು ಬಹುಮುಖ್ಯವಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಸಾಲಿನ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿಸಲು ಅರಿಶಿನ ಗಣೇಶ ಅಭಿಯಾನ ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ರೋಗನಿರೋಧಕ ಅರಿಶಿನ ಬಳಸಿ, ಅರಿಶಿನ ಮಿಶ್ರಿತವಾದ ಗೋಧಿಹಿಟ್ಟು ಮತ್ತು ರಾಗಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶ ವಿಗ್ರಹವನ್ನು ಮನೆಯಲ್ಲಿಯೇ ತಯಾರಿಸಿ ಪೂಜಿಸಿ, ಮನೆಯ ಆವರಣದಲ್ಲಿ ವಿಸರ್ಜಿಸುವ ಮೂಲಕ (ಮನೆಯ ಆವರಣದಲ್ಲಿರುವ ಗಿಡಗಳಿಗೆ ಅಥವಾ ಪಾರ್ಕ್‍ಗಳಿಗೆ) ಪರಿಸರ ಮತ್ತು ಜಲ ಮೂಲಗಳ ಮಾಲಿನ್ಯ ತಡೆಗಟ್ಟಬಹುದು.

ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು ಅರಿಶಿನ ಮಿಶ್ರಿತವಾದ ಗೋಧಿಹಿಟ್ಟು ಮತ್ತು ರಾಗಿ ಹಿಟ್ಟಿನಿಂದ ತಯಾರಿಸಿದ 10 ಲಕ್ಷ ಗಣೇಶ ಮೂರ್ತಿಗಳನ್ನು ಪೂಜಿಸುವ ಮೂಲಕ ವಿಶ್ವ ದಾಖಲೆಯ ಪ್ರಯತ್ನಕ್ಕೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ದಾವಣಗೆರೆ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ವಿಶಿಷ್ಟ ರೀತಿಯಲ್ಲಿ ತಯಾರಿಸಿದ ಅರಿಶಿನ ಮಿಶ್ರಿತವಾದ ಗೋಧಿಹಿಟ್ಟು ಮತ್ತು ರಾಗಿ ಹಿಟ್ಟಿನಿಂದ ನಿರ್ಮಿಸಿರುವ ಅರಿಶಿನ ಗಣೇಶ ವಿಗ್ರಹಗಳ ಛಾಯಾಚಿತ್ರಗಳನ್ನು ಸೆ.08 ರಂದು ಬೆಳಿಗ್ಗೆ 6 ರಿಂದ ಸೆ.10 ರ ಸಂಜೆ 6 ರವರೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಲತಾಣ http://kspcb.karnataka.gov.in, youtube@kspcbkarnataka.gov.in, facebook@kspcbofficial, Twitter@karnatakakspcb, Instagram:kspcb_offical ನಲ್ಲಿ ಅಪ್ ಲೋಡ್ ಮಾಡಿ ಆಕರ್ಷಕ ಬಹು ಮಾನ ಗೆಲ್ಲಬಹುದೆಂದು ಪರಿಸರ ಅಧಿಕಾರಿ ಎಂ.ಎಸ್. ಮಹೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *