ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಿರತರಿಗೆ ಕೆಲಸಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದರೂ, ಕೆಲಸಕ್ಕೆ ಹಾಜರಾಗದ ಬಿಎಂಟಿಸಿಯ 2,443 ಸಿಬ್ಬಂದಿಯನ್ನು ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಾರಿಗೆ ನೌಕರರ ಮುಷಕರ 11 ದಿನಕ್ಕೆ ಕಾಲಿಟ್ಟಿದೆ. ಇಂದು ಬಿಎಂಟಿಸಿ ಸಿಬ್ಬಂದಿ ಮೇಲೆ ಆಡಳಿತ ಮಂಡಳಿ ಅಮಾನತು ಅಸ್ತ್ರ ಪ್ರಯೋಗಿಸಿದೆ. ಇಂದು ಬರೋಬ್ಬರಿ 2,443 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದರಲ್ಲಿ 1,974 ಮಂದಿ ಹಿರಿಯ ನೌಕರರಾಗಿದ್ದಾರೆ.
ವಜಾಗೊಂಡಿರುವ ಸಿಬ್ಬಂದಿಗಳಿಗೆ ನೋಟಿಸ್ ನೀಡಿದ್ದ ಉತ್ತರ ನೀಡಲು ಸೋಮವಾರದವರೆಗೆ ಗಡುವು ನೀಡಿದೆ. ಇನ್ನು ಸೂಕ್ತ ಕಾರಣ ನೀಡದ ಎಲ್ಲಾ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗುವುದು ಬಿಎಂಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.



