Connect with us

Dvgsuddi Kannada | online news portal | Kannada news online

ದಸರಾ ಹಬ್ಬಕ್ಕೆ KSRTC ಹೆಚ್ಚುವರಿಯಾಗಿ 1 ಸಾವಿರ ಬಸ್ ಓಡಿಸಲು ನಿರ್ಧಾರ

ಪ್ರಮುಖ ಸುದ್ದಿ

ದಸರಾ ಹಬ್ಬಕ್ಕೆ KSRTC ಹೆಚ್ಚುವರಿಯಾಗಿ 1 ಸಾವಿರ ಬಸ್ ಓಡಿಸಲು ನಿರ್ಧಾರ

ಬೆಂಗಳೂರು: ಕರ್ನಾಕ  ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೆಂಗಳೂರು ಕೇಂದ್ರದಿಂದ ದಸರಾ ಅಂಗವಾಗಿ 1000 ಹೆಚ್ಚುವರಿ ವಿಶೇಷ ಬಸ್‌ ಓಡಿಸಲು ನಿರ್ಧಾರ ಕೈಗೊಂಡಿದೆ.  ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ.

ಅಕ್ಟೋಬರ್13 ರಿಂದ 21ರವರೆಗೆ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚುವರಿ ವಿಶೇಷ ಬಸ್‌ಗಳು ಬೆಂಗಳೂರು ನಗರದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ಸಂಚಾರ ನಡೆಸಲಿದೆ.

ದಸರಾ ಪ್ಯಾಕೇಜ್ ಘೋಷಣೆ 2021ರ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ದಸರಾ ಸಂದರ್ಭದಲ್ಲಿ ಸಾವಿರಾರು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ನೋಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್ ಘೋಷಿಸಲಾಗಿದೆ.

ಮೈಸೂರು ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಅಕ್ಟೋಬರ್ 9ರಿಂದ 24ರ ತನಕ ಈ ಪ್ಯಾಕೇಜ್‌ಗಳಲ್ಲಿ ಸಂಚಾರ ನಡೆಸಬಹುದಾಗಿದೆ. ಗಿರಿ ದರ್ಶನಿ, ದೇವ ದರ್ಶಿನಿ, ಜಲದರ್ಶನಿ ಪ್ಯಾಕೇಜ್‌ಗಳ ಮೂಲಕ ಜನರು ಪ್ರವಾಸಿ ತಾಣಗಳನ್ನು ವೀಕ್ಷಿಸಬಹುದು. ಕಲಬುರಗಿಯಿಂದ ಹೆಚ್ಚುವರಿ ಬಸ್ ವಿಜಯದಶಮಿ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್‌ಗಳನ್ನು ಅಕ್ಟೋಬರ್ 12ರಂದು ಬೆಂಗಳೂರಿಗೆ, ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 13 ರಂದು ಬೆಂಗಳೂರಿನಿಂದ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 20ರಂದು ನಿಗಮದ ವ್ಯಾಪ್ತಿಯಿಂದ ಬೆಂಗಳೂರಿಗೆ ಮತ್ತು ಇತರೆ ಸ್ಥಳಗಳಿಗೆ ಬೇಡಿಕೆಗನುಸಾರ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ. ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಹಾಗೂ ಹೈದರಾಬಾದ್, ಶ್ರೀಶೈಲಂ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ ಮತ್ತು ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‍ ಸಂಚಾರ ನಡೆಸಲಿದೆ.

ಪ್ರಯಾಣಿಕರು ಹೆಚ್ಚುವರಿ ಬಸ್‍ಗಳಿಗೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಲು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯತಿ ಇದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದ್ದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯತಿ ಲಭಿಸಲಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top