ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ (Electric bus) ಗಳ ಚಾರ್ಜಿಂಗ್ ಕೇಂದ್ರ ನಿರ್ಮಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕಾಮಗಾರಿ ಶುರು ಮಾಡಿದೆ. ಬೆಂಗಳೂರು, ಮೈಸೂರು, ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.
ಮೊದಲ ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದ್ದು, ನಂತರದ ದಿನಗಳಲ್ಲಿ ಮಡಿಕೇರಿ, ವಿರಾಜಪೇಟೆ, ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗ ನಡುವೆಯೂ ಬಸ್‌ಗಳು ಸಂಚರಿಸಲಿವೆ. ಈಗಾಗಲೇ ನಾವು 50 ಎಲೆಕ್ಟ್ರಿಕ್ ಬಸ್‌ಗಳಿಗೆ ಆರ್ಡರ್ ಮಾಡಿದ್ದೇವೆ ಎಂದು ಕೆಎಸ್‌ಆರ್‌ಟಿಸಿ ಎಂಡಿ ಅನುಪ್ ಕುಮಾರ್ ತಿಳಿಸಿದ್ದಾರೆ.
ಡಿಸೆಂಬರ್ ಅಂತ್ಯದ ವೇಳೆಗೆ ನಾವು ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತೇವೆ. ಎಲೆಕ್ಟ್ರಿಕ್ ಬಸ್‌ಗಳನ್ನು ಹಂತಹಂತವಾಗಿ ನಮಗೆ ಬರಲಿವೆ. ಪ್ರತಿ ಎರಡು ತಿಂಗಳಿಗೊಮ್ಮೆ 10 ಬಸ್ ಲಭ್ಯವಾಗಲಿದೆ. ಮೆಜೆಸ್ಟಿಕ್, ಮೈಸೂರು ಮತ್ತು ವಿರಾಜಪೇಟೆ ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳು ನಿರ್ಮಾಣ ಹಂತದಲ್ಲಿವೆ. ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಡಿಪೋಗಳಲ್ಲೂ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.



