ಬೆಳಗಾವಿ: ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 2 ಸಾವಿರ ಚಾಲಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಈ ಮಾಹಿತಿ ನೀಡಿದ್ದಾರೆ. ಇನ್ನು ಚಾಲಕರಿಗೆ ತರಬೇತಿ ಅವಧಿಯಲ್ಲಿ 10 ಸಾವಿರ ನೀಡಲಾಗುತ್ತಿತ್ತು.ಇದನ್ನು ಈಗ 20 ಸಾವಿರಕ್ಕೆ ಹೆಚ್ಚಿಸಲಾಗುವುದು.ಕೆಲವು ಕಡೆ ರಸ್ತೆಗಳು ಸರಿ ಇಲ್ಲದ ಕಾರಣ ಬಸ್ ಸಂಚರಿಸುತ್ತಿಲ್ಲ. ಚಾಲಕರು ಮತ್ತು ಕಂಡಕ್ಟರ್‌ಗಳ ಕೊರತೆಯೂ ಇದೆ ಎಂದರು.



