ನವದೆಹಲಿ: ಭಾರತೀಯ ಜೀವ ವಿಮಾ ನಿಗಮ (LIC) 300 ಸಹಾಯಕ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ : https://ibpsonline.ibps.in/licaaojan23/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. 21 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ- 700 ರೂ., ಎಸ್ ಸಿ, ಎಸ್ ಟಿ ಹಾಗೂ ಇತರೆ ಅಭ್ಯರ್ಥಿಗಳಿಗೆ- 85 ರೂ. ಪ್ರಿಲಿಮಿನರಿ ಟೆಸ್ಟ್ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023, ಪ್ರಿಲಿಮಿನರಿ ಟೆಸ್ಟ್ ದಿನಾಂಕ- ಫೆಬ್ರವರಿ 17, 2023, ಮುಖ್ಯ ಪರೀಕ್ಷೆ ದಿನಾಂಕ- ಮಾರ್ಚ್ 18, 2023. ಹೆಚ್ಚಿನ ಮಾಹಿತಿಗೆ https://ibpsonline.ibps.in/licaaojan23/ ವೆಬ್ ಸೈಟ್ ಗೆ ಭೇಟಿ ನೀಡಿಬಹುದು.