Connect with us

Dvgsuddi Kannada | online news portal | Kannada news online

ಜನ ಸಾಮಾನ್ಯರಿಗೆ ಮತ್ತೆ ಸಿಲಿಂಡರ್ ಬೆಲೆ ಏರಿಕೆ ಶಾಕ್ ..!

ಪ್ರಮುಖ ಸುದ್ದಿ

ಜನ ಸಾಮಾನ್ಯರಿಗೆ ಮತ್ತೆ ಸಿಲಿಂಡರ್ ಬೆಲೆ ಏರಿಕೆ ಶಾಕ್ ..!

ನವದೆಹಲಿ: ಅಗತ್ಯ ವಸ್ತುಗಳ ನಿರಂತರ ಬೆಲೆ‌ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮತ್ತೊಮ್ಮೆ ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ. ಈ ತಿಂಗಳಲ್ಲಿಯೇ ಎರಡು ಬಾರಿ ಬೆಲೆ ಏರಿಕೆಯಾಗಿದೆ.

ಇಂದು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಎಲ್ಲ ನಗರಗಳಲ್ಲಿ 1000 ರೂ.ಗಡಿ ದಾಟಿದೆ.

ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1003 ರೂ., ಕೋಲ್ಕತಾದಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 1029 ರೂ., ಚೆನ್ನೈನಲ್ಲಿ ಇಂದಿನಿಂದ 1018.5 ರೂ. ಇದೆ.

ಇದಕ್ಕೂ ಮೊದಲು ಮೇ 7 ರಂದು ಗೃಹ ಬಳಖೆ ಸಿಲಿಂಡರ್ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ, ಕಮರ್ಷಿಯಲ್  ಸಿಲಿಂಡರ್   ಕೂಡ ಮೇ 1ರಂದು ದುಬಾರಿಯಾಗಿತ್ತು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top