ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎನ್ನುವ ಮೂಲಕ ಸ್ವಪಕ್ಷದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಪ್ರಕರಣ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಬಿಜೆಪಿ ಸರ್ಕಾರವೇ ಲೋಕಾಯುಕ್ತ ಮರುಸ್ಥಾಪನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ತೆಗೆದು ಎಸಿಬಿ ರಚನೆ ಮಾಡಿತ್ತು. ಆದರೆ, ನಮ್ಮ ಸರ್ಕಾರ ಬಂದ ನಂತರ ಲೋಕಾಯುಕ್ತವನ್ನು ಮರು ಸ್ಥಾಪಿಸಿದೆ, ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ಆಗತ್ತದೆ ಎಂದರು.
ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಹೀಗಾಗಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ತಪ್ಪು ಮಾಡಿದ್ರೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.



